ADVERTISEMENT

ಹೊಸಪೇಟೆ: ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಮರಳಿ ಕಾಂಗ್ರೆಸ್ ಗೂಡಿಗೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 7:03 IST
Last Updated 8 ಸೆಪ್ಟೆಂಬರ್ 2022, 7:03 IST
ಮಾಜಿ ಶಾಸಕ ಎಚ್.ಆರ್. ಗವಿಯಪ್ಪ
ಮಾಜಿ ಶಾಸಕ ಎಚ್.ಆರ್. ಗವಿಯಪ್ಪ   

ಹೊಸಪೇಟೆ (ವಿಜಯನಗರ): ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆಯುವುದು ಖಚಿತವಾಗಿದ್ದು, ಶುಕ್ರವಾರ (ಸೆ. 9) ಬೆಂಗಳೂರಿನಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರುವರು. ಇದರೊಂದಿಗೆ ಅವರು ಮರಳಿ ಮಾತೃಪಕ್ಷದ ಗೂಡು ಸೇರಲಿದ್ದಾರೆ.

ಶುಕ್ರವಾರ ನಡೆಯಲಿರುವ ಕಾರ್ಯಕ್ರಮಕ್ಕೆ ಅವರ ನೂರಾರು ಬೆಂಬಲಿಗರು ನಗರದಿಂದ ಬೆಂಗಳೂರಿಗೆ ಹೊರಡಲು ಸಿದ್ಧತೆ ನಡೆಸಿದ್ದಾರೆ. 200ಕ್ಕೂ ಹೆಚ್ಚು ವಾಹನಗಳಿಗೆ ವ್ಯವಸ್ಥೆ ಮಾಡಲಾಗಿದೆ.

2018ರಲ್ಲಿ ಅನಂದ್ ಸಿಂಗ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಗವಿಯಪ್ಪ ಅವರಿಗೆ ವಿಜಯನಗರ ಕ್ಷೇತ್ರದಿಂದ ಸ್ಪರ್ಧೆಗೆ ಟಿಕೆಟ್ ನಿರಾಕರಿಸಲಾಗಿತ್ತು. ಅವರು ಬಿಜೆಪಿ ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಪೈಪೋಟಿ ನೀಡಿ ಆನಂದ್ ಸಿಂಗ್ ವಿರುದ್ಧ ಸೋಲು ಕಂಡಿದ್ದರು.

ADVERTISEMENT

ಒಂದು ವರ್ಷದ ಅಂತರದಲ್ಲಿ ಆನಂದ್ ಸಿಂಗ್ ಪುನಃ ಪಕ್ಷಾಂತರ ಮಾಡಿ ಬಿಜೆಪಿ ಸೇರಿದ್ದರು. 2019ರ ಉಪಚುನಾವಣೆಯಲ್ಲಿ ಬಿಜೆಪಿ ಗವಿಯಪ್ಪ ಬದಲು ಆನಂದ್ ಸಿಂಗ್ ಅವರಿಗೆ ಮಣೆ ಹಾಕಿತ್ತು. ಆ ಚುನಾವಣೆಯಲ್ಲಿ ಮುನಿಸಿಕೊಂಡು ಗವಿಯಪ್ಪ ಸ್ಪರ್ಧಿಸಲಿಲ್ಲ. ನಂತರ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಈಗ ಚುನಾವಣೆಗೆ ಕೆಲವೇ ತಿಂಗಳಿರುವಾಗ ಕಾಂಗ್ರೆಸ್ ಸೇರುತ್ತಿದ್ದಾರೆ. ನಾಯಕತ್ವ ಇಲ್ಲದೆ ಸೊರಗಿದ್ದ ಕಾಂಗ್ರೆಸ್ ಪಕ್ಷಕ್ಕೆ ವಿಜಯನಗರದಲ್ಲಿ ಸಾರಥಿ ಸಿಕ್ಕಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.