ADVERTISEMENT

ಹೊಸಪೇಟೆ: ಕೆರೆಗಳಲ್ಲಿ ಬಣ್ಣ ಲೇಪಿತ ಗಣೇಶ ವಿಸರ್ಜನೆ ನಿಷೇಧ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2023, 6:02 IST
Last Updated 2 ಸೆಪ್ಟೆಂಬರ್ 2023, 6:02 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹೊಸಪೇಟೆ (ವಿಜಯನಗರ): ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಕೆಲ ಕ್ರಮಗಳನ್ನು ಸೂಚಿಸಲಾಗಿದೆ ಎಂದು ಪರಿಸರ ಅಧಿಕಾರಿ ಎಸ್.ಸಿ.ಸುರೇಶ್ ತಿಳಿಸಿದ್ದಾರೆ.

ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು, ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ, ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ADVERTISEMENT

ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು. ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಬೇಕು, ಕಸ ಸಂಗ್ರಹಣಾ ವಾಹನಕ್ಕೆ ನೀಡಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು ಎಂದು ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.