ADVERTISEMENT

ಒಳ ಮೀಸಲಾತಿ ಸಮೀಕ್ಷೆ: ನಿಖರ ಮಾಹಿತಿ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಮೇ 2025, 14:28 IST
Last Updated 2 ಮೇ 2025, 14:28 IST
ಹಗರಿಬೊಮ್ಮನಹಳ್ಳಿಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯದ ಗಣತಿದಾರರು ಮತ್ತು ಮೇಲ್ವಿಚಾರಕರ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರ ನೆಡಯಿತು
ಹಗರಿಬೊಮ್ಮನಹಳ್ಳಿಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯದ ಗಣತಿದಾರರು ಮತ್ತು ಮೇಲ್ವಿಚಾರಕರ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರ ನೆಡಯಿತು   

ಹಗರಿಬೊಮ್ಮನಹಳ್ಳಿ: ‘ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಮೇ 5ರಿಂದ ಆರಂಭಗೊಳ್ಳಲಿದ್ದು, ಸಂಬಂಧಿಸಿದ ಎಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು’ ಎಂದು ಹೊಸಪೇಟೆ ಉಪವಿಭಾಗಾಧಿಕಾರಿ ವಿವೇಕಾನಂದ ಹೇಳಿದರು.

ಪಟ್ಟಣದ ಜಿವಿಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಆಡಳಿತ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ, ಶಿಕ್ಷಣ ಇಲಾಖೆಯಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯದ ಗಣತಿದಾರರು ಮತ್ತು ಮೇಲ್ವಿಚಾರಕರ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

‘ವಿಧಾನಸಭಾ ಕ್ಷೇತ್ರದ 254 ಬೂತ್‍ಗಳಲ್ಲಿ 300ಕ್ಕೂ ಹೆಚ್ಚು ಗಣತಿದಾರರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ಯಾವುದೇ ಗೊಂದಲಗಳಿಲ್ಲದೆ ಪೂರ್ಣಗೊಳಿಸಬೇಕು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ತಹಶೀಲ್ದಾರ್ ಆರ್.ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಡೊಳ್ಳಿನ್, ಬಿಇಒ ಮೈಲೇಶ್ ಬೇವೂರ್, ಕ್ಷೇತ್ರ ಸಮನ್ವಯಾಧಿಕಾರಿ ಪ್ರಭಾಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.