ಹೊಸಪೇಟೆ (ವಿಜಯನಗರ): ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಮಂಗಳವಾರ ಸಂಜೆ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.
ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಗುರು ರಾಘವೇಂದ್ರರ ಭಾವಚಿತ್ರ ನೀಡಿ ಗೌರವಿಸಿದರು. ಬಳಿಕ ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ ರಥ, ಸಪ್ತಸ್ವರ ಮಂಟಪ ಕಣ್ತುಂಬಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.