ADVERTISEMENT

ವಿಜಯನಗರ: ರೈತರಿಗೆ ನೆರವಾಗಲು ರೈತ ಸಂಘ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 13:23 IST
Last Updated 4 ಜೂನ್ 2021, 13:23 IST
ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಶುಕ್ರವಾರ ಹೊಸಪೇಟೆಯಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ. ಶಂಕರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಶುಕ್ರವಾರ ಹೊಸಪೇಟೆಯಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ. ಶಂಕರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಕೋವಿಡ್‌ನಿಂದ ರೈತರು ಮತ್ತು ಕೃಷಿ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಅವರ ನೆರವಿಗೆ ಬರಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ.

ಈ ಸಂಬಂಧ ಶುಕ್ರವಾರ ನಗರದಲ್ಲಿ ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ. ಶಂಕರ್‌ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ರೈತರು ಬೆಳೆದ ಹಣ್ಣು, ತರಕಾರಿ, ಭತ್ತ, ಶೇಂಗಾ, ಬಾಳೆ ಮಾರಾಟ ಮಾಡಲು ಖರೀದಿ ಕೇಂದ್ರಗಳಿಲ್ಲ. ಬೇರೆಡೆ ಸಾಗಿಸಲು ಆಗುತ್ತಿಲ್ಲ. ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ರೈತರಿಗೆ ತಲುಪಿಲ್ಲ. ಬೆಲೆ ಹಾನಿ ಸಮೀಕ್ಷೆ ನಡೆದಿಲ್ಲ’ ಎಂದು ಸಂಘಟನೆಯ ತಾಲ್ಲೂಕು ಅಧ್ಯಕ್ಷ ಜಿ. ಕೆರೆ ಹನುಮಂತ ಆರೋಪಿಸಿದ್ದಾರೆ.

ADVERTISEMENT

‘ಈರುಳ್ಳಿ ಶೇಖರಣಾ ಘಟಕ ನಿರ್ಮಿಸಿ ಗ್ರಾಮೀಣ ಭಾಗದ ರೈತರಿಗೂ ಅನುಕೂಲ ಮಾಡಿಕೊಡಬೇಕು. ತಾಲ್ಲೂಕಿನ ರಾಜಾಪುರದ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರಾವರಿ ಯೋಜನೆ ಕಲ್ಪಿಸಬೇಕು. ನಗರದಲ್ಲಿನ ಸಕ್ಕರೆ ಕಾರ್ಖಾನೆ ಪುನರಾರಂಭಿಸಿ ಬಾಕಿ ಹಣ ಪಾವತಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯಲ್ಲಾಲಿಂಗ, ಬಾಣದ ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.