
ಪ್ರಜಾವಾಣಿ ವಾರ್ತೆಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಹಳೇ ಊರಿನ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಮೊದಲ ಸೆಮಿಸ್ಟರ್ ಪುಸ್ತಕಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರಭಾರ ಮುಖ್ಯ ಶಿಕ್ಷಕ ವೀರನಗೌಡ ತಿಳಿಸಿದ್ದಾರೆ.
ಯಾರೋ ಕಿಡಿಗೇಡಿಗಳು ಕಿಟಕಿ ಮೂಲಕ ಸಿಗರೇಟ್ ಸೇದಿ ಬಿಸಾಕಿರಬಹುದು ಎಂದು ಮುಖ್ಯ ಶಿಕ್ಷಕ ತಿಳಿಸಿದ್ದಾರೆ. ಈ ಕುರಿತಂತೆ ಎಸ್ಡಿಎಂಸಿ ಅವರೊಂದಿಗೆ ಚರ್ಚಿಸಿ ದೂರು ಸಲ್ಲಿಸಲಾಗುವುದು ಎಂದಿದ್ದಾರೆ. ಬೆಂಕಿ ಹತ್ತಿಕೊಂಡ ವೇಳೆ ಶಾಲೆಗೆ ಮಕ್ಕಳು ಬಂದಿರಲಿಲ್ಲವಾದ್ದರಿಂದ ಆಗಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.