ADVERTISEMENT

ಹಂಪಿ ಉತ್ಸವ: ಸಮನ್ವಯದಿಂದ ಕಾರ್ಯನಿರ್ವಹಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2025, 16:07 IST
Last Updated 8 ಜನವರಿ 2025, 16:07 IST

ಹೊಸಪೇಟೆ (ವಿಜಯನಗರ): ಫೆಬ್ರುವರಿ 28ರಿಂದ ಮೂರು ದಿನ ನಡೆಯುವ ಹಂಪಿ ಉತ್ಸವವನ್ನು ವಿಶೇಷವಾಗಿ ಆಚರಿಸಲು ಅಧಿಕಾರಿಗಳು ಸಿದ್ಧರಾಗಬೇಕಿದ್ದು, ಸಿದ್ಧತೆಗೆ ಉಪ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹಂಪಿ ಉತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಇಡೀ ರಾಜ್ಯದ ಜನತೆಯನ್ನು ಆಕರ್ಷಿಸುವ ನಿಟ್ಟಿನಲ್ಲಿ ಪೂರ್ವ ತಯಾರಿ ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ ಮೊಹಮ್ಮದ್ ಅಲಿ ಅಕ್ರಮ್, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.