ADVERTISEMENT

ಹಂಪಿ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರು: ಒಬ್ಬ ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2025, 7:56 IST
Last Updated 19 ಮಾರ್ಚ್ 2025, 7:56 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹೊಸಪೇಟೆ (ವಿಜಯನಗರ): ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದು, ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ.

ಪತ್ನಿ ಸೌಮ್ಯ (38), ಪುತ್ರಿ ಭವಾನಿ (12), ಶಿವು (10) ಅಪಾಯದಿಂದ ಪಾರಾಗಿದ್ದಾರೆ.

ADVERTISEMENT

'ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ವಿಷ ಸೇವಿಸಿದ್ದರು. ಇದಕ್ಕೆ ನಿಖರ ಕಾರಣ ತಿಳಿಯಲು ಪ್ರಯತ್ನಿಸಲಾಗುತ್ತಿದೆ, ಚಂದ್ರಯ್ಯ ಸಾಲ ಮಾಡಿಕೊಂಡಿದ್ದರು ಎಂಬ ಶಂಕೆ ಇದೆ' ಎಂದು ಎಸ್ಪಿ ಶ್ರೀಹರಿಬಾಬು ಬಿ.ಎಲ್. ಮಾಧ್ಯಮದವರಿಗೆ ತಿಳಿಸಿದರು.

ಮೂವರೂ ಸದ್ಯ ಇಲ್ಲಿನ 100 ಹಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕ್ರಿಮಿನಾಶಕದ ಅಡ್ಡಪರಿಣಾಮ ಗಂಭೀರ ಇರಬಹುದಾದ ಕಾರಣ ಅವರನ್ನು ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲು ಸಿದ್ಧತೆ ನಡೆದಿದೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.