ADVERTISEMENT

ಜೂ.24ರಿಂದ ಹಂಪಿ ಸ್ಮಾರಕಗಳ ವೀಕ್ಷಣೆಗೆ ಮುಕ್ತ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 16:29 IST
Last Updated 23 ಜೂನ್ 2021, 16:29 IST
ಹಂಪಿ ಕಲ್ಲಿನ ರಥದ ಸಾಂದರ್ಭಿಕ ಚಿತ್ರ
ಹಂಪಿ ಕಲ್ಲಿನ ರಥದ ಸಾಂದರ್ಭಿಕ ಚಿತ್ರ   

ಹೊಸಪೇಟೆ (ವಿಜಯನಗರ): ಇಲ್ಲಿನ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳು ಗುರುವಾರದಿಂದ (ಜೂ.24) ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳ್ಳಲಿವೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಎಂದಿನಂತೆ ಪೂಜೆ ನೆರವೇರಲಿದೆ. ಆದರೆ, ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ಮುಂದುವರಿಸಲಾಗಿದೆ.

‘ಹಂಪಿಯ ಎಲ್ಲ ಸ್ಮಾರಕಗಳು, ಕಮಲಾಪುರದಲ್ಲಿನ ವಸ್ತು ಸಂಗ್ರಹಾಲಯ ಗುರುವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು. ಸಾರ್ವಜನಿಕರು ಆನ್‌ಲೈನ್‌ ಮತ್ತು ನಾಲ್ಕು ಕೌಂಟರ್‌ಗಳಲ್ಲಿ ನಗದು ಪಾವತಿಸಿ ಟಿಕೆಟ್‌ ಪಡೆಯಬಹುದು. ವಿರೂಪಾಕ್ಷೇಶ್ವರ ದೇವಸ್ಥಾನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರಲಿದ್ದು, ಎಂದಿನಂತೆ ನಿರ್ಬಂಧ ಮುಂದುವರಿಯಲಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.