ADVERTISEMENT

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ಹಂಪಿ‌ ಸ್ಮಾರಕಗಳು ಮುಳುಗಡೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 9:08 IST
Last Updated 26 ಜುಲೈ 2021, 9:08 IST
   

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಿರುವುದರಿಂದ ವಿಶ್ವಪ್ರಸಿದ್ಧ ಹಂಪಿಯ ಸ್ಮಾರಕಗಳು ಮುಳುಗಡೆಯಾಗಿವೆ.

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪದ ಸ್ನಾನಘಟ್ಟ, ಚಕ್ರತೀರ್ಥ, ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಸ್ಮಾರಕಗಳು ಮುಳುಗಡೆಯಾಗಿವೆ.

ಹೊಸಪೇಟೆ-ಗಂಗಾವತಿ ನಡುವೆ ಸಂಪರ್ಕ ಕಲ್ಪಿಸುವ ಕಂಪ್ಲಿ ಸೇತುವೆಗೆ ಸಮನಾಗಿ ನೀರು ಹರಿಯುತ್ತಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕದೊಂದಿಗೆ ಸಂಪರ್ಕ ಕಡಿತಗೊಂಡಿದೆ.

ADVERTISEMENT

133 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ದ ಜಲಾಶಯದಲ್ಲಿ‌ 32 ಟಿಎಂಸಿ ಹೂಳು ಸಂಗ್ರಹವಾಗಿದ್ದು, ನೀರಿನ ಸಂಗ್ರಹ ಮಟ್ಟ 101 ಟಿಎಂಸಿಗೆ ಕುಸಿದಿದೆ. ಸದ್ಯ 95 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯ ಸಂಪೂರ್ಣ ತುಂಬಲು ಇನ್ನೂ ಆರು ಟಿಎಂಸಿ ನೀರು ಬೇಕು. ಒಳಹರಿವು ಎರಡು ಲಕ್ಷ ಕ್ಯುಸೆಕ್ ಗೂ ಅಧಿಕವಿದೆ. ದಿನಕ್ಕೆ 13ರಿಂದ 14 ಟಿಎಂಸಿ ಅಡಿ ನೀರು ಬರುತ್ತಿರುವುದರಿಂದ 20 ಕ್ರಸ್ಟ್ ಗೇಟ್ ಗಳನ್ನು‌ ತೆರೆದು ನದಿಗೆ ನೀರು‌ ಹರಿಸಲಾಗುತ್ತಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.