ಹೊಸಪೇಟೆ: ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ಮತ್ತು ಶ್ರೀ ಚಂದ್ರಮೌಳೇಶ್ವರ ಸ್ವಾಮಿಯ ಜೋಡಿ ಬ್ರಹ್ಮರಥೋತ್ಸವ ಏ.12ರಂದು ಜರುಗಲಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.
ಏ,6ರಿಂದ 14ರವರೆಗೆ ಹಂಪಿ ಜಾತ್ರಾ ಮಹೋತ್ಸವ ಜರುಗಲಿದೆ. ಹಂಪಿ ಕ್ಷೇತ್ರದ ಫೀಠಾಧಿಪತಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ 12ರಂದು ಜೋಡಿ ಬ್ರಹ್ಮ ರಥೋತ್ಸವ ಜರುಗಲಿದೆ. ಶ್ರೀಕೃಷ್ಣದೇವರಾಯ ಅರ್ಪಿಸಿದ ಚಿನ್ನದ ಕಿರೀಟವನ್ನು 10ರಿಂದ 14ರವರೆಗೆ ಅಲಂಕಾರ ಮಾಡಲಾಗುವುದು. ಎಲ್ಲಾ ಭಕ್ತರಿಗೆ ಉಚಿತ ಅನ್ನದಾಸೋಹ ಪ್ರಸಾದ ವಿತರಣೆ ಮಾಡಲಾಗುತ್ತದೆ. ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಲು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.