ಹೊಸಪೇಟೆ (ವಿಜಯನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸರ್ಕಾರ ಅನುದಾನ ನೀಡದೆ ಸತಾಯಿಸುತ್ತಿರುವುದನ್ನು ವಿರೋಧಿಸಿ ಕ್ಯಾಂಪಸ್‌ನಲ್ಲಿ ಡಿ.10ರಂದು ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ಡಿ.16ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ಅಧ್ಯಕ್ಷ ಭೀಮಾಶಂಕರ ಪಾಟೀಲ್ ತಿಳಿಸಿದ್ದಾರೆ.
ಲೋಕಾಯುಕ್ತ ಜನಸಂಪರ್ಕ ಸಭೆ
ಹೊಸಪೇಟೆ: ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಡಿ.11ರಿಂದ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿವೆ.
11ರಂದು ಕೊಟ್ಟೂರು, 13ರಂದು ಕೂಡ್ಲಿಗಿ, 18ರಂದು ಹರಪನಹಳ್ಳಿಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಶ್ವ ಮಾನವ ಹಕ್ಕುಗಳ ದಿನ ಇಂದು
ಹೊಸಪೇಟೆ: ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಡಿ.10ರಂದು ಬೆಳಿಗ್ಗೆ 9.30ಕ್ಕೆ ಹೊಸಪೇಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.