
ಪ್ರಜಾವಾಣಿ ವಾರ್ತೆಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ರಾಗಿಮಸಲವಾಡ ಗ್ರಾಮದ ಗೋಕಟ್ಟೆಯಲ್ಲಿ ಭಾನುವಾರ ಸಂಜೆ ಸ್ನೇಹಿತರ ಜತೆಗೆ ಈಜಲು ಹೋಗಿದ್ದ ಬಾಲಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದು, ಸೋಮವಾರ ಆತನ ಮೃತದೇಹ ಪತ್ತೆಯಾಗಿದೆ.
ಸಿದ್ದಾರ್ಥ (11) ಮೃತಪಟ್ಟ ಬಾಲಕ. ಆತನಿಗೆ ಈಜು ಬರುತ್ತಿರಲಿಲ್ಲ, ಸ್ನೇಹಿತರೊಂದಿಗೆ ಗೋಕಟ್ಟೆಗೆ ತೆರಳಿದ್ದಾಗ ಕಾಲುಜಾರಿ ಬಿದ್ದಿದ್ದ. ಆತನ ಸ್ನೇಹಿತರು ಮನೆಗೆ ಬಂದು ಪೋಷಕರಿಗೆ ಮಾಹಿತಿ ನೀಡಿದ್ದರು. ರಾತ್ರಿ ಹುಡುಕಾಡಿದ್ದರೂ ಮೃತದೇಹ ಸಿಕ್ಕಿರಲಿಲ್ಲ. ಸೋಮವಾರ ಬೆಳಿಗ್ಗೆ ಗ್ರಾಮಸ್ಥರು ಹುಡುಕಾಡಿದಾಗ ಮೃತದೇಹ ಸಿಕ್ಕಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕ ಗ್ರಾಮದ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ. ಹಲುವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.