ಬಂಧನ
ಹರಪನಹಳ್ಳಿ: ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಮನೆಯಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಕಳ್ಳರನ್ನು, ಪ್ರಕರಣ ದಾಖಲಾದ ಎರಡು ತಾಸಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹಡಗಲಿ ತಾಲ್ಲೂಕು ಮಾನ್ಯರ ಮಸಲವಾಡದ ಶಿವಕುಮಾರ, ಹಗರಿಬೊಮ್ಮನಹಳ್ಳಿಯ ಜಹಾಂಗೀರ ಭಾಷ ಬಂಧಿತರು. ಅವರಿಂದ ₹ 26 ಸಾವಿರ ನಗದು, ₹40 ಸಾವಿರ ಬೆಲೆ ಬಾಳುವ ಚಿನ್ನದ ಜುಮುಕಿ, ಒಂದು ಬೈಕ್ ಜಪ್ತಿ ಮಾಡಲಾಗಿದೆ.
ಉಚ್ಚಂಗಿದುರ್ಗದ ಅಂಜಿನಪ್ಪ ಅವರ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮಂಗಳವಾರ ಬೆಳಿಗ್ಗೆ ಮನೆ ಬೀಗ ಮುರಿದು ಕಳವು ಮಾಡಿ ಪರಾರಿಯಾಗಿದ್ದರು.
ವಿಷಯ ತಿಳಿಯುತ್ತಿದ್ದಂತೆ ಪಕ್ಕದ ಮನೆಯವರು ನೀಡಿದ ಸುಳಿವು ಆಧರಿಸಿ ಉಚ್ಚಂಗಿದುರ್ಗದಲ್ಲಿ ಬೈಕ್ ಬಿಟ್ಟು ಪರಾರಿಯಾಗಿದ್ದ ಆರೋಪಿಗಳನ್ನು ತೌಡೂರು ಕ್ರಾಸ್ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.