ಜಯಾಬಾಯಿ
ಹೊಸಪೇಟೆ (ವಿಜಯನಗರ): ಹರಪನಹಳ್ಳಿ ತಾಲ್ಲೂಕಿನ ದಿದ್ದಗಿ ತಾಂಡಾದ ನಿವಾಸಿ ಜಯಾಬಾಯಿ (52) ಎಂಬುವವರು ಮಂಗಳವಾರ ಮನೆ ಸಮೀಪದ ಅಂಗಡಿಯಲ್ಲಿ ಕುಳಿತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮಹಿಳೆಗೆ ತೀವ್ರ ಹೃದಯಾಘಾತವಾಗಿತ್ತು ಎಂದು ಹೇಳಲಾಗಿದ್ದು, ಸ್ಥಳೀಯರು ಆವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.
‘ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 9 ಮಂದಿ ಹೃದಯಾಘಾತದಿಂದ ಮೃತಪಟ್ಟಿರುವುದು ದಾಖಲಾಗಿದೆ. ಈ ಪೈಕಿ ಹೊಸಪೇಟೆಯ ಆರು ಮಂದಿ ಇದ್ದಾರೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ದಿದ್ದಗಿ ತಾಂಡಾದ ಜಯಾಬಾಯಿ ಅವರ ಮೃತದೇಹವನ್ನು ಇನ್ನೂ ಆಸ್ಪತ್ರೆಗೆ ತರಲಾಗಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ನಿಖರ ಕಾರಣ ತಿಳಿಯಬಹುದಷ್ಟೇ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.