ADVERTISEMENT

ವಿಜಯನಗರ–ಬಳ್ಳಾರಿ: ಮಳೆಗೆ 60 ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 13:33 IST
Last Updated 12 ಅಕ್ಟೋಬರ್ 2022, 13:33 IST
ವಿಜಯನಗರ–ಬಳ್ಳಾರಿಯಲ್ಲಿ ಒಂದೇ ದಿನ 60 ಮನೆಗಳಿಗೆ ಹಾನಿ
ವಿಜಯನಗರ–ಬಳ್ಳಾರಿಯಲ್ಲಿ ಒಂದೇ ದಿನ 60 ಮನೆಗಳಿಗೆ ಹಾನಿ   

ಹೊಸಪೇಟೆ: ಸತತ ಸುರಿಯುತ್ತಿರುವ ಮಳೆಗೆ ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯಲ್ಲಿ ಒಂದೇ ದಿನ 60 ಮನೆಗಳಿಗೆ ಹಾನಿಯಾಗಿದೆ.

ಮಂಗಳವಾರ ರಾತ್ರಿ ಸುರಿದ ಮಳೆಗೆ ವಿಜಯನಗರ ಜಿಲ್ಲೆಯಲ್ಲಿ 42, ಬಳ್ಳಾರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ 18 ಮನೆಗಳು ಭಾಗಶಃ ಕುಸಿದು ಬಿದ್ದಿವೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಮತ್ತಿಹಳ್ಳಿಯಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ.

ಆಲದಹಳ್ಳಿ, ಮತ್ತಿಹಳ್ಳಿ ನಡುವಿನ ರಸ್ತೆ ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಬುಧವಾರವೂ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.