ಕೂಡ್ಲಿಗಿ: ತಾಲ್ಲೂಕಿನ ಹಿರೇಕುಂಬಳಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಿ. ಚಂದ್ರಮ್ಮ, ಉಪಾಧ್ಯಕ್ಷರಾಗಿ ದುರುಗಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಗ್ರಾಮ ಪಂಚಾಯಿಯಲ್ಲಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಿರೇಕುಂಬಳಗುಂಟೆ ಕ್ಷೇತ್ರ-3ರ ಸದಸ್ಯೆ ಜಿ. ಚಂದ್ರಮ್ಮ ಹಾಗೂ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಬಯಲುತುಂಬಗುದ್ದಿ ಕ್ಷೇತ್ರ-5ರ ಸದಸ್ಯೆ ದುರುಗಮ್ಮ ಮಾತ್ರ ನಾಮ ಪತ್ರ ಸಲ್ಲಿಸಿದ್ದರು.
ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಕಾರ್ಯನಿರ್ವಹಿಸಿದರು.
ಗ್ರಾಮ ಪಂಚಾಯಿತಿಯ ಒಟ್ಟು 23 ಸದಸ್ಯರಲ್ಲಿ 22 ಜನ ಹಾಜರಿಯಾಗಿದ್ದರು. ಅಭಿವೃದ್ಧಿ ಅಧಿಕಾರಿ ನಿಂಗಪ್ಪ, ಚುನಾವಣಾ ವಿಭಾಗದ ಮಂಜುನಾಥ, ವಾಸುದೇವ, ಗ್ರಾಮ ಆಡಳಿತಾಧಿಕಾರಿ ಸಂಪ್ರಿತ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.