ADVERTISEMENT

ಹೂವಿನಹಡಗಲಿ: ಹೊಳಗುಂದಿ ಸಿದ್ಧೇಶ್ವರ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 5:35 IST
Last Updated 3 ಜನವರಿ 2026, 5:35 IST
ಹೂವಿನಹಡಗಲಿ ತಾಲ್ಲೂಕು ಹೊಳಗುಂದಿಯಲ್ಲಿ ಸಿದ್ಧೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು
ಹೂವಿನಹಡಗಲಿ ತಾಲ್ಲೂಕು ಹೊಳಗುಂದಿಯಲ್ಲಿ ಸಿದ್ಧೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು   

ಹೂವಿನಹಡಗಲಿ: ತಾಲ್ಲೂಕಿನ ಹೊಳಗುಂದಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿದ್ಧೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ದೇವಸ್ಥಾನದಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಅಳವುಂಡಿ ಮಠದ ಮರುಳಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥಕ್ಕೆ ಪೂಜೆ ನೆರವೇರಿದ ಬಳಿಕ ಭಕ್ತರ ಜಯಘೋಷ, ಹರ್ಷೋದ್ಗಾರದ ನಡುವೆ ರಥೋತ್ಸವ ಪ್ರಾರಂಭವಾಯಿತು.

ರಥ ಸಾಗುತ್ತಿದ್ದಂತೆ ಭಕ್ತರು ಬಾಳೆಹಣ್ಣು, ಉತ್ತತ್ತಿ ಎಸೆದು ನಮಿಸಿದರು. ಹೊಳಗುಂದಿ, ಬಾವಿಹಳ್ಳಿ ಸುತ್ತಲ ಗ್ರಾಮಗಳ ಅಪಾರ ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನಾಶೀರ್ವಾದ ಪಡೆದರು. ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಮಹೇಶ್ವರಪ್ಪ ಹಾಗೂ ಪದಾಧಿಕಾರಿಗಳು, ಗ್ರಾಮದ ಮುಖಂಡರು ಭಾಗವಹಿಸಿದ್ದರು.

ADVERTISEMENT

ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.