ADVERTISEMENT

ಹೊಸಪೇಟೆ: ಒಂದೇ ದಿನ 107 ಮಂದಿಗೆ ಕೋವಿಡ್‌, ಒಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 13:01 IST
Last Updated 9 ಜನವರಿ 2022, 13:01 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಹೊಸಪೇಟೆ (ವಿಜಯನಗರ): ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಉಲ್ಬಣಿಸಿದೆ.

ಕಳೆದ ಎರಡು ದಿನಗಳಿಂದ 50ರ ಗಡಿ ದಾಟಿದ್ದ ಕೋವಿಡ್‌ ಪ್ರಕರಣಗಳು, ಭಾನುವಾರ ಒಂದೇ ದಿನ ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಅನೇಕ ತಿಂಗಳ ಬಳಿಕ ಭಾನುವಾರ ಕೋವಿಡ್‌ಗೆ ಒಬ್ಬರು ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ 82 ಜನರಲ್ಲಿ ಕೋವಿಡ್‌ ದೃಢಪಟ್ಟರೆ, ವಿಜಯನಗರದಲ್ಲಿ 25 ಜನರಿಗೆ ಸೋಂಕು ತಗುಲಿದೆ. ಒಟ್ಟು 107 ಪ್ರಕರಣಗಳು ದೃಢವಾಗಿವೆ. ಎರಡೂ ಜಿಲ್ಲೆಗಳಲ್ಲಿ ಸದ್ಯ 394 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT