ADVERTISEMENT

ಹೊಸಪೇಟೆ: ಮಹಿಳೆ ವಿವಸ್ತ್ರ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 4:49 IST
Last Updated 11 ಜನವರಿ 2026, 4:49 IST
ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ, ಹಲ್ಲೆ ಖಂಡಿಸಿ ಹೊಸಪೇಟೆಯಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು –ಪ್ರಜಾವಾಣಿ ಚಿತ್ರ/ ಲವ ಕೆ.
ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ, ಹಲ್ಲೆ ಖಂಡಿಸಿ ಹೊಸಪೇಟೆಯಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು –ಪ್ರಜಾವಾಣಿ ಚಿತ್ರ/ ಲವ ಕೆ.   

ಹೊಸಪೇಟೆ (ವಿಜಯನಗರ): ಹುಬ್ಬಳ್ಳಿಯಲ್ಲಿ ಪೊಲೀಸರು ಮಹಿಳೆಯ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಹಾಗೂ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಕಾರ್ಯಕರ್ತರು ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಆರುಂಡಿ ಸುವರ್ಣ ಮಾತನಾಡಿ, ಪಕ್ಷದ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ಪೊಲೀಸರು ನಡೆಸಿಕೊಂಡಿರುವ ರೀತಿ ನಾಗರಿಕ ಸಮಾಜವು ತಲೆತಗ್ಗಿಸುವಂತದ್ದು, ಇದು ಅಕ್ಷಮ್ಯ ಅಪರಾಧವಾಗಿದ್ದು ಪೊಲೀಸರ ಈ ವರ್ತನೆ ಖಂಡನೀಯ ಎಂದರು.

ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ತೇಜೋವಧೆ ಮಾಡುವ ಸಲುವಾಗಿ ಶ್ರದ್ಧಾಂಜಲಿ ಪೋಸ್ಟರ್‌ಗಳನ್ನು ಹಾಕಿದ್ದು ಸಹ ಖಂಡನೀಯ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಅವರು ಆಗ್ರಹಿಸಿದರು. ಬಳಿಕ ರಾಜ್ಯಪಾಲರಿಗೆ ಮನವಿ ಕಳುಹಿಸಿಕೊಡಲಾಯಿತು.

ADVERTISEMENT

ಜಿಲ್ಲಾ ವಕ್ತಾರ ಅಶೋಕ್ ಜಿರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಕವಿತಾ, ಮಂಡಲ ಅಧ್ಯಕ್ಷ ಶಂಕರ ಮೇಟಿ, ಪ್ರಧಾನ ಕಾರ್ಯದರ್ಶಿಗಳಾದ ಮಧುರ ಚೆನ್ನ ಶಾಸ್ತ್ರಿ, ನಟರಾಜ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾದೇವಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಿಚಡಿ ಕೊಟ್ರೇಶ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.