
ಚಿತ್ರ: ಗೆಟ್ಟಿ
ಹೊಸಪೇಟೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಅಂಗುಳ ಮತ್ತು ಇತರ ಮುಖದ ವಿರೂಪ ಶಸ್ತ್ರಚಿಕಿತ್ಸೆ ಸಿಗುತ್ತಿರುವುದು ಬಡವರ್ಗದ ಜನರಿಗೆ ತುಂಬಾ ಅನುಕೂಲವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಲ್.ಆರ್.ಶಂಕರ ನಾಯ್ಕ್ ಹೇಳಿದರು.
ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಏರ್ಪಡಿಸಿದ್ದ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳು ಕುರಿತು ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಸೇವೆಗಳ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸೀಳು ತುಟಿ, ಅಂಗುಳಿನ ಸಮಸ್ಯೆ ಅಸಹಜ ಭ್ರೂಣದ ಬೆಳವಣಿಗೆಯಿಂದ ಆಗುತ್ತದೆ. ಇದನ್ನು ಸೂಕ್ಷ್ಮ ಮತ್ತು ಸಣ್ಣ ಶಸ್ತ್ರ ಚಿಕಿತ್ಸೆಯಿಂದ ಸರಿಪಡಿಸಬಹುದು ಎಂದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.