ADVERTISEMENT

ವಿಜಯನಗರ ಜಿಲ್ಲೆಯಲ್ಲಿ ಬಿರುಸಿನ ಮಳೆ: 4 ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 12:34 IST
Last Updated 28 ಜುಲೈ 2022, 12:34 IST
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದೆ
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದೆ   

ಹೊಸಪೇಟೆ (ವಿಜಯನಗರ ಜಿಲ್ಲೆ): ಗುರುವಾರ ನಸುಕಿನ ಜಾವದಿಂದ ಬೆಳಗಿನ ವರೆಗೆ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ನಾಲ್ಕು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ 3, ಕಿತ್ನೂರು ಗ್ರಾಮದಲ್ಲಿ 1 ಮನೆಗೆ ಹಾನಿಯಾಗಿದೆ. ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ 14 ಮನೆಗಳಿಗೆ ನೀರು ನುಗ್ಗಿದ್ದರಿಂದ ಗೃಹಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿ, ಹೂವಿನಹಡಗಲಿಯ ಸರಾಸರಿ 10 ಸೆಂ.ಮೀ ಮಳೆಯಾಗಿದೆ.

ತುಂಗಭದ್ರಾ ಜಲಾಶಯದ ಒಳಹರಿವು ಪುನಃ ಹೆಚ್ಚಾಗಿದ್ದು, ಗುರುವಾರ 92246 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಬುಧವಾರ 44255 ಒಳಹರಿವು ದಾಖಲಾಗಿತ್ತು. 80604 ಕ್ಯುಸೆಕ್‌ ಹೊರಹರಿವು ಇದೆ. 28 ಕ್ರಸ್ಟ್‌ಗೇಟ್‌ಗಳಿಂದ 73849 ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.