ADVERTISEMENT

ಪೌರಕಾರ್ಮಿಕರಿಗೆ 152 ಮನೆ ಮಂಜೂರು; ಆರೋಗ್ಯದ ಕಡೆ ಗಮನ ಹರಿಸಲು ಶಾಸಕರ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 4:50 IST
Last Updated 24 ಸೆಪ್ಟೆಂಬರ್ 2025, 4:50 IST
ಹೊಸಪೇಟೆಯ ನಗರಸಭೆ ಆವರಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು ಮತ್ತು ಸಾರ್ವಜನಿಕರು  ಪಾಲ್ಗೊಂಡಿದ್ದರು
ಹೊಸಪೇಟೆಯ ನಗರಸಭೆ ಆವರಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು ಮತ್ತು ಸಾರ್ವಜನಿಕರು  ಪಾಲ್ಗೊಂಡಿದ್ದರು   

ಹೊಸಪೇಟೆ (ವಿಜಯನಗರ): ‘ನಗರದ ಸ್ವಚ್ಛತೆ ಹಾಗೂ ಸೌಂದರ್ಯಕ್ಕಾಗಿ ದುಡಿಯುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರದಿಂದ 152  ಮನೆಗಳು ಮಂಜೂರಾಗಿದೆ’ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ನಗರಸಭೆ ಆವರಣದಲ್ಲಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಆಶ್ರಯದಲ್ಲಿ ಮಂಗಳವಾರ  ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಕಾರ್ಮಿಕರು ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಕಾಂಗ್ರೆಸ್ ಸರ್ಕಾರ ಎಂದಿಗೂ ಅವರ ಪರವಿದೆ’ ಎಂದರು.

ADVERTISEMENT

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರು ಜೀವದ ಹಂಗು ತೊರೆದು, ಜನರಿಗೆ ಸೇವೆ ನೀಡಿದ್ದಾರೆ’ ಎಂದರು.

ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಮಾತನಾಡಿ, ‘ಪೌರಕಾರ್ಮಿಕರಿಗೆ ಮನೆ ನಿರ್ಮಿಸಿಕೊಡಲು ಜಂಬುನಾಥಹಳ್ಳಿ ಬೈಪಾಸ್‌ನಲ್ಲಿ 9 ಎಕರೆ ಜಾಗ ಮೀಸಲಿಡಲಾಗಿದೆ. ಎಲ್ಲರಿಗೂ ನಿವೇಶನ ದೊರೆಯಬೇಕು. ಅಗತ್ಯ ಸಹಾಯಧನ ಒದಗಿಸಲು ನಗರಸಭೆ ಸಿದ್ಧವಿದೆ’ ಎಂದು ಹೇಳಿದರು.

ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ಎಸ್‌ಪಿ ಎಸ್‌.ಜಾಹ್ನವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಆಯುಕ್ತ ಎ.ಶಿವಕುಮಾರ್‌, ಉಪಾಧ್ಯಕ್ಷ ರಮೇಶ ಗುಪ್ತಾ, ಸದಸ್ಯ ಜೀವರತ್ನಂ, ಎಇಇ ಮನ್ಸೂರ್ ಅಲಿ, ಪರಿಸರ ಎಂಜಿನಿಯರ್‌ ಆರತಿ, ವಿರೂಪಾಕ್ಷಿ, ಪೌರಕಾರ್ಮಿಕ ಮುಖಂಡ ಜಿ.ನೀಲಕಂಠಪ್ಪ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.