
ಪ್ರಜಾವಾಣಿ ವಾರ್ತೆ
ಹೊಸಪೇಟೆ (ವಿಜಯನಗರ): ನವೀಕರಣಗೊಂಡು ಉದ್ಘಾಟನೆಗೊಳ್ಳಲಿರುವ ನಗರದ ರೈಲು ನಿಲ್ದಾಣದ ಛಾಯಾಚಿತ್ರಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಅವರ ಟ್ವಿಟ್ಟರ್ ಖಾತೆಯಲ್ಲಿ ಭಾನುವಾರ ಪೋಸ್ಟ್ ಮಾಡಿದ್ದಾರೆ.
‘ಸಂಪರ್ಕಕ್ಕೆ ಹೆಚ್ಚಿನ ಒತ್ತು ಸಿಗುವುದರೊಂದಿಗೆ ವಾಣಿಜ್ಯ ಮತ್ತು ಸಾಂಸ್ಕೃತಿಕವಾಗಿ ಸಂಪರ್ಕ ಬೆಸೆಯಲಿದೆ. ಹೊಸಪೇಟೆ ಜನತೆಗೆ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ.
ನವೀಕರಣಗೊಂಡ ಹೊಸಪೇಟೆ ರೈಲು ನಿಲ್ದಾಣ ಉದ್ಘಾಟನೆ ನಾಳೆ
ಧಾರವಾಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪ್ರಧಾನಿ ರೈಲು ನಿಲ್ದಾಣ ಉದ್ಘಾಟಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.