ADVERTISEMENT

ಹೊಸಪೇಟೆ | ಮುಂದಿನ ವರ್ಷದೊಳಗೆ 2.30 ಲಕ್ಷ ಮನೆ ವಿತರಣೆ: ಸಚಿವ ಜಮೀರ್ ಅಹಮದ್ ಖಾನ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 4:41 IST
Last Updated 1 ನವೆಂಬರ್ 2025, 4:41 IST
   

ಹೊಸಪೇಟೆ (ವಿಜಯನಗರ): ಬಡವರಿಗೆ ಸೂರು ಒದಗಿಸಲು ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದ್ದು, ಮುಂದಿನ ವರ್ಷದೊಳಗೆ 2.30 ಲಕ್ಷ ಮನೆಗಳನ್ನು ವಿತರಿಸಲಾಗುವುದು ಎಂದು ವಸತಿ ಸಚಿವರೂ ಆಗಿರುವ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 70ನೇ ಕನ್ಬಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರ ಧ್ವಜಾರೀಹಣ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ವಸತಿ ಯೋಜನೆಗಳ ವಿಚಾರದಲ್ಲಿ ಬಡವರನ್ನು ಸಂಪೂರ್ಣ ಕಡೆಗಣಿಸಿತ್ತು, ಕಾಂಗ್ರೆಸ್ ಸರ್ಕಾರ ಇದನ್ನು ಆರನೇ ಗ್ಯಾರಂಟಿ ಎಂಬಂತೆ ಪರಿಗಣಿಸಿ ಸೂರು ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದರು.

ಮುಂದಿನ ಬಾರಿಯೂ ಕಾಂಗ್ರೆಸ್ ಸರ್ಕಾರವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.