ಹೊಸಪೇಟೆ (ವಿಜಯನಗರ): ಜಿಲ್ಲೆಯ ಎರಡು ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ಭಾನುವಾರ ₹6 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ಭುವನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆಗೆ ಸಾಗಿಸುತ್ತಿದ್ದ ₹4 ಲಕ್ಷ ಹಾಗೂ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಚೆಕ್‌ಪೋಸ್ಟ್‌ನಲ್ಲಿ ಹಿರೇಕೆರೂರಿನಿಂದ ಮಾಗಳಕ್ಕೆ ದಾಖಲೆ ಇಲ್ಲದೆ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ ₹2 ಲಕ್ಷ ನಗದು ಹಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹೊಸಪೇಟೆ ಗ್ರಾಮೀಣ ಮತ್ತು ಹಿರೇಹಡಗಲಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.