ADVERTISEMENT

ಹೊಸಪೇಟೆ | ಗ್ರಾಮಗಳ ನೀರು ಪರೀಕ್ಷೆ ಕಡ್ಡಾಯ: ಮೊಹಮ್ಮದ್ ಅಕ್ರಂ ಅಲಿ ಷಾ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 6:29 IST
Last Updated 4 ಸೆಪ್ಟೆಂಬರ್ 2025, 6:29 IST
ಮೊಹಮ್ಮದ್ ಅಲಿ ಅಕ್ರಂ ಷಾ
ಮೊಹಮ್ಮದ್ ಅಲಿ ಅಕ್ರಂ ಷಾ   

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಕೆಗೆ ಮುನ್ನ ಕಡ್ಡಾಯವಾಗಿ ಪರೀಕ್ಷಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಕ್ರಂ ಅಲಿ ಷಾ ಹೇಳಿದರು.

ತಮ್ಮ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಆರೋಗ್ಯ ಹಿತದೃಷ್ಟಿಯಿಂದ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕ, ಜಲಜೀವನ್ ಮಿಷನ್‌ನಿಂದ ಪೂರೈಕೆಯಾಗುವ ನೀರನ್ನು ಕಡ್ಡಾಯವಾಗಿ ಕುಡಿಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದರು.

‘ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಎಫ್‌ಟಿಕೆ ಕಿಟ್ ಮೂಲಕ ನೀರನ್ನು ಪರೀಕ್ಷಿಸಿ ವರದಿ ನೀಡಬೇಕು. ನೀರಿನಿಂದಾಗಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಜಲ ಜೀವನ್ ಮಿಷನ್ ಯೋಜನೆಯಲ್ಲಿ ಮುಕ್ತಾಯಗೊಂಡ ಕಾಮಗಾರಿಗಳನ್ನು ಹರ್ ಘರ್ ಜಲ್ ಎಂದು ಘೋಷಣೆ ಮಾಡಿ 24x7 ನೀರು ಸರಬರಾಜು ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮವಹಿಸಬೇಕು’ ಎಂದರು.

ADVERTISEMENT

ಘೋಷಣೆಗೆ ಸೂಚನೆ: ಕೂಡ್ಲಿಗಿ ತಾಲ್ಲೂಕಿನ ರಾಮದುರ್ಗ, ಕಕ್ಕುಪ್ಪಿ, ಕೊಟ್ಟೂರು ತಾಲ್ಲೂಕಿನ ಕಂದಗಲ್ಲು, ರಾಂಪುರ, ಚಿರಬಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮಗಳನ್ನು 24x7 ನೀರು ಸರಬರಾಜು ಗ್ರಾಮವೆಂದು ಘೋಷಣೆ ಮಾಡಲು ತ್ವರಿತ ಕ್ರಮವಹಿಸಬೇಕು ಎಂದು ಸಿಇಒ ಸೂಚಿಸಿದರು.

ರಾಮದುರ್ಗ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಪ್ಪ, ಬೈಲುವದ್ದಿಗೇರಿ ಅಧ್ಯಕ್ಷೆ ಜೆ.ಲಕ್ಷ್ಮೀದೇವಿ, ಹಂಪಿ ಅಧ್ಯಕ್ಷೆ ರಜನಿ ಷಣ್ಮುಖಗೌಡ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಎಸ್.ದೀಪಾ, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಸಿ.ಎಂ.ಮಹೇಶ್ವರಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.