ADVERTISEMENT

ಹೊಸಪೇಟೆ | ಭಾರಿ ಮಳೆಗೆ ಬಾಳೆ, ಹತ್ತಿ, ಮೆಣಸಿನಕಾಯಿ ಬೆಳೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 5:14 IST
Last Updated 2 ಆಗಸ್ಟ್ 2022, 5:14 IST
   

ಹೊಸಪೇಟೆ (ವಿಜಯನಗರ): ಭಾರಿ ಮಳೆಗೆ ತಾಲ್ಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅಪಾರ ಪ್ರಮಾಣದ ಬೆಳೆ‌ ನಷ್ಟವಾಗಿದೆ.
ಇನ್ನಷ್ಟೇ ಸಮೀಕ್ಷೆ ನಡೆಯಬೇಕಿದ್ದು, ಬಳಿಕ ಎಷ್ಟು ಎಕರೆ ಬೆಳೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಲಿದೆ.

ತಾಲ್ಲೂಕಿನ ಧರ್ಮಸಾಗರದಲ್ಲಿ ಹತ್ತಿ, ಮೆಣಸಿನಕಾಯಿ ಬೆಳೆ ಜಲಾವೃತವಾದರೆ, ಹಂಪಿ, ಕಡ್ಡಿರಾಂಪುರದಲ್ಲಿ ಬಾಳೆ ತೋಟಕ್ಕೆ ನೀರು ನುಗ್ಗಿದೆ.

ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹರಪನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಮಂಗಳವಾರ ನಸುಕಿನ ಜಾವ ಐದು ಗಂಟೆಯಿಂದ ಹತ್ತು ಗಂಟೆಯವರೆಗೆ ಬಿರುಸಿನ ಮಳೆಯಾಗಿದೆ. ಈಗ ರಭಸದ ಮಳೆ‌ನಿಂತಿದ್ದು, ತುಂತುರು ಮಳೆಯಾಗುತ್ತಿದೆ.
ಜಿಲ್ಲಾಡಳಿತ ಈಗಾಗಲೇ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದೆ. ಬೆಳಗಿನ ವೇಳೆ ಜೋರು ಮಳೆ ಬಿದ್ದದ್ದರಿಂದ ಹಾಲು, ದಿನಪತ್ರಿಕೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ದೈನಂದಿನ ಕೆಲಸಕ್ಕೆ‌ಹೋಗುವವರು ಮಳೆಯಲ್ಲೇ ಕೊಡೆ ಹಿಡಿದುಕೊಂಡು ಹೆಜ್ಜೆ ಹಾಕಿದರು. ಬಿರುಸಿನ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.