ತುಂಗಭದ್ರಾ ಅಣೆಕಟ್ಟೆ
ಹೊಸಪೇಟೆ: ತುಂಗಭದ್ರಾ ಬಲದಂಡೆಯ ಮೇಲ್ಮಟ್ಟದ ಕಾಲುವೆ (ಎಚ್‌ಎಲ್‌ಸಿ) ಮತ್ತು ಕೆಳಮಟ್ಟದ ಕಾಲುವೆಗಳಿಗೆ (ಎಲ್‌ಎಲ್‌ಸಿ) ಗುರುವಾರದಿಂದ ನೀರು ಹರಿಸಲಾಗುವುದು ಎಂದು ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಕೆ.ರೆಡ್ಡಿ ತಿಳಿಸಿದ್ದಾರೆ.
ಜೂನ್ 27ರಂದು ಬೆಂಗಳೂರಿನಲ್ಲಿ ನಡೆದಿದ್ದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ಆಗಿರುವ ನಿರ್ಧಾರದಂತೆ ಗುರುವಾರ ಬೆಳಿಗ್ಗೆಯಿಂದಲೇ ಈ ಎರಡೂ ಕಾಲುವೆಗಳಿಗೆ ನೀರು ಹರಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಇದೇ ವಿಷಯದ ಹಿನ್ನೆಲೆಯಲ್ಲಿ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮ ಗೌಡ, ಪದಾಧಿಕಾರಿ ದರೂರ್ ಸಾಗರ್ ಗೌಡ ಅವರು ಕಾರ್ಯದರ್ಶಿ ಅವರನ್ನು ಭೇಟಿ ಮಾಡಿದ್ದರು. ಆಗಲೂ ಅವರಿಗೆ ಇದೇ ಭರವಸೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.