
ಉಮಾ
ಹೊಸಪೇಟೆ (ವಿಜಯನಗರ): ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾದ ಮಹಿಳೆಯೊಬ್ಬರನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ರೈಲು ನಿಲ್ದಾಣದ ಸಮೀಪದ ಚಾಪಲಘಟ್ಟ ಪ್ರದೇಶದಲ್ಲಿ ಮಂಗಳವಾರ ನಸುಕಿನಲ್ಲಿ ನಡೆದಿದೆ.
ಉಮಾ (28) ಕೊಲೆಯಾದವರು, ಇವರು ರೈಲ್ವೆ ಕ್ಯಾಟರಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
13 ವರ್ಷದ ಹಿಂದೆ ವಿವಾಹವಾಗಿದ್ದ ಉಮಾ ಅವರಿಗೆ ಮೂವರು ಗಂಡು ಮಕ್ಕಳಿದ್ದಾರೆ. ಐದಾರು ವರ್ಷಗಳ ಹಿಂದೆ ಇವರು ಆಂಧ್ರಪ್ರದೇಶ ಮೂಲದ ಗಂಡನಿಂದ ದೂರವಾಗಿದ್ದರು. ಇಬ್ಬರು ಪುತ್ರರು ಉಮಾ ಬಳಿ, ಒಬ್ಬ ಪುತ್ರ ತಂದೆಯೊಂದಿಗೆ ಇದ್ದಾನೆ.
ಈಚೆಗೆ ಸ್ಥಳೀಯ ಯುವಕನೊಬ್ಬನೊಂದಿಗೆ ಈಕೆಗೆ ಅನೈತಿಕ ಸಂಬಂಧ ಬೆಳೆದಿತ್ತು. ಸಂಬಂಧ ಹೊಂದಿದ್ದ ಯುವಕನಿಂದಲೇ ಈಕೆ ಕೊಲೆಯಾಗಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಸ್‌ಪಿ ಎಸ್.ಜಾಹ್ನವಿ, ಎಎಸ್‌ಪಿ ಜಿ.ಮಂಜುನಾಥ್, ಡಿವೈಎಸ್‌ಪಿ ಟಿ.ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತವಾಡ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.