ಹೊಸಪೇಟೆ: ತಾಲ್ಲೂಕಿನ ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿನ 19 ವರ್ಷದ ‘ದೇವಿ’ ಎಂಬ ಹೆಣ್ಣು ಹುಲಿ ಗುರುವಾರ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ.
‘ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರ ಗಾಯಗೊಂಡು ನಿತ್ರಾಣವಾಗಿದ್ದ ಹೆಣ್ಣು ಹುಲಿಯನ್ನು ಎರಡು ವರ್ಷಗಳ ಹಿಂದೆ ಚಿಕಿತ್ಸೆಗಾಗಿ ಮೃಗಾಲಯಕ್ಕೆ ತರಲಾಗಿತ್ತು. ಆರೋಗ್ಯ ಕೊಂಚ ಸುಧಾರಿಸಿತ್ತು’ ಎಂದು ಡಿಸಿಎಫ್ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ನಾಯ್ಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.