
ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲಾ ಕೃಷಿ ಇಲಾಖೆಯು ‘ಪ್ರಜಾವಾಣಿ’ ಸಹಯೋಗದಲ್ಲಿ ಹೊರತಂದಿರುವ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಮಂಗಳವಾರ ಇಲ್ಲಿ ಬಿಡುಗಡೆಗೊಳಿಸಿದರು.
ಯಾವ ಕಾಲದಲ್ಲಿ ಏನು ಬೆಳೆಯುಬೇಕು, ಬೀಜೋಪಚಾರ, ಗೊಬ್ಬರ ಪೂರೈಕೆ, ಬೆಳೆ ವಿಮೆ ಸಹಿತ ಹತ್ತಾರು ಮಾಹಿತಿಯನ್ನು ಈ ಕ್ಯಾಲೆಂಡರ್ ಒಳಗೊಂಡಿರುವುದಕ್ಕೆ ಇಬ್ಬರೂ ಮೆಚ್ಚುಗೆ ವ್ಯಕ್ತಪಡಿಸಿದರು.
ಜನವರಿ ತಿಂಗಳ ಕ್ಯಾಲೆಂಡರ್ ಭಾಗದಲ್ಲಿ ಸಿರಿಧಾನ್ಯ ಮತ್ತು ಸಾವಯವ ಕೃಷಿ ಕುರಿತಾದ ಮಾಹಿತಿ ಇದ್ದರೆ, ಮುಂದಿನ ತಿಂಗಳಲ್ಲಿ ನ್ಯಾನೊ ಯೂರಿಯಾ ಬಳಕೆ, ಮಣ್ಣು ಪರೀಕ್ಷೆ, ಕೃಷಿ ಭಾಗ್ಯ ಯೋಜನೆಯ ವೈಶಿಷ್ಟ್ಯ, ಮುಂಗಾರು ಬಿತ್ತನೆಗೆ ಮೊದಲು ಗಮನಿಸಬೇಕಾದ ಅಂಶಗಳು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತು ಮಾಹಿತಿ, ಬೆಳೆ ಸಮೀಕ್ಷೆ, ಪೀಡೆ ನಾಶಕಗಳ ಸಮರ್ಪಕ ಮತ್ತು ಸುರಕ್ಷಿತ ಬಳಕೆ, ಪಿಎಂ ಕಿಸಾನ್ ಯೋಜನೆ, ಸಮಗ್ರ ಕೃಷಿ ಪದ್ಧತಿ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆ ಹಾಗೂ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದ ಕುರಿತ ಮಾಹಿತಿ ಇದೆ.
ಜಂಟಿ ಕೃಷಿ ನಿರ್ದೆಶಕ ಡಿ.ಟಿ.ಮಂಜುನಾಐ್. ಇಲಾಖೆಯ ತಾಂತ್ರಿಕ ಅಧಿಕಾರಿ ರಾಜು, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ವಿಜಯ ಕುಮಾರ್, ‘ಪ್ರಜಾವಾಣಿ’ ಪ್ರಸರಣ ವಿಭಾಗದ ವಿಜಯನಗರ ಬಳ್ಳಾರಿ ಜಿಲ್ಲೆಗಳ ಕಾರ್ಯನಿರ್ವಾಹಕ ಆನಂದ ದಂಡಿನ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.