ADVERTISEMENT

ಹೂವಿನ ಹಡಗಲಿ: ಕಲುಷಿತ ನೀರು ಸೇವಿಸಿ ಸಾವು, ಕುಟುಂಬಕ್ಕೆ ತಲಾ ₹3 ಲಕ್ಷ ಪರಿಹಾರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 11:23 IST
Last Updated 5 ಅಕ್ಟೋಬರ್ 2021, 11:23 IST
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ   

ಬೆಂಗಳೂರು: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಸಮೀಪದ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲಾ ₹3 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೊಂದು ದುಃಖದ ವಿಚಾರವಾಗಿದೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಿರಿಯ ಅಧಿಕಾರಿ ಮುನಿಶ್‌ ಮೌದ್ಗಿಲ್‌ ಅವರ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಪಡೆಯಲಾಗುವುದು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT