ADVERTISEMENT

ಅಕ್ರಮ ಗೋವು ಸಾಗಾಟ; ಇಬ್ಬರಿಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 13:28 IST
Last Updated 24 ಜೂನ್ 2021, 13:28 IST
ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಗೋವು
ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಗೋವು   

ಹೊಸಪೇಟೆ (ವಿಜಯನಗರ): ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ಎತ್ತು, ಎರಡು ಗೂಳಿ ಹಾಗೂ ಅವುಗಳನ್ನು ಸಾಗಾಟ ಮಾಡುತ್ತಿದ್ದ ಮಿನಿ ಅಶೋಕ್‌ ಲೇಲ್ಯಾಂಡ್‌ ವಾಹನ ವಶಪಡಿಸಿಕೊಂಡಿರುವ ಪೊಲೀಸರು, ಬೆಂಗಳೂರಿನ ವಾಸಿಂ (34), ದಾವೂದ್‌ (21) ಎಂಬುವರನ್ನು ವಶಕ್ಕೆ ಪಡೆದು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

‘ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ ಬಳ್ಳಾರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಬುಧವಾರ ಸಂಜೆ ನಗರ ಹೊರವಲಯದ ಕಾರಿಗನೂರು ಬಳಿ ಕಾರ್ಯಾಚರಣೆ ನಡೆಸಿ, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.