ADVERTISEMENT

ವಿಜಯನಗರ | ಎರಡು ಪ್ರತ್ಯೇಕ ಪ್ರಕರಣ; ₹91,000 ಮೌಲ್ಯದ ಅಕ್ಕಿ ವಶ

ಪಡಿತರ ಅಕ್ಕಿ: 26 ಕ್ವಿಂಟಲ್‌ ಅಕ್ರಮ ಸಾಗಣೆ ಪತ್ತೆ

​ಪ್ರಜಾವಾಣಿ ವಾರ್ತೆ
Published 28 ಮೇ 2025, 8:16 IST
Last Updated 28 ಮೇ 2025, 8:16 IST
   

ಹೊಸಪೇಟೆ (ವಿಜಯನಗರ): ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಬುಧವಾರ ಭೇದಿಸಿರುವ ಪೊಲೀಸರು, ಒಟ್ಟು ₹91 ಸಾವಿರ ಮೌಲ್ಯದ 26.30 ಕ್ವಿಂಟಲ್‌ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ನಗರದ ಚಿತ್ತವಾಡ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೊದಲ್ಲಿ ಸಾಗಿಸುತ್ತಿದ್ದ ಎರಡು ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿದ ಪೊಲೀಸರು, ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಕೊಟ್ಟೂರು ಪಟ್ಟಣದ ಪಾಳ್ಯ ರಸ್ತೆಯ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್‌ ಸಮೀಪ ಝೆನಾನ್  ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 24.30 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಇಲ್ಲೂ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಶ್ರೀಹರಿಬಾಬು ಬಿ.ಎಲ್‌.ತಿಳಿಸಿದ್ದಾರೆ.

ಮಂಗಳವಾರವಷ್ಟೇ ನಗರದ ಜಂಬುನಾಥ ರಸ್ತೆ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 331 ಕ್ವಿಂಟಲ್ ಅಕ್ಕಿಯನ್ನು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಸತತ ಎರಡನೇ ದಿನವೂ ಅಕ್ರಮ ಅಕ್ಕಿ ಸಾಗಣೆಯನ್ನು ಪತ್ತೆಹಚ್ಚಿದಂತಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.