ಹೊಸಪೇಟೆ: ‘ವಿಧಾನಮಂಡಲದ ಅಧಿವೇಶನ ಆರಂಭವಾಗುವ ಆಗಸ್ಟ್ 11ರಿಂದಲೇ ಒಳಮೀಸಲಾತಿ ಜಾರಿಗಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟ ಅವಧಿ ಅಹೋರಾತ್ರಿ ಸತ್ಯಾಗ್ರಹ ಅರಂಭವಾಗಲಿದೆ’ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಸಂಚಾಲಕ ಕರಿಯಪ್ಪ ಗುಡಿಮನಿ ತಿಳಿಸಿದರು.
‘ಮುಂಗಾರು ಅಧಿವೇಶನದಲ್ಲೇ ಒಳಮೀಸಲಾತಿ ಜಾರಿಗೊಳಿಸುವ ತೀರ್ಮಾನ ಸರ್ಕಾರ ಕೈಗೊಳ್ಳಬೇಕು. ಬೀದಿಗಳಲ್ಲಿ ಹೋರಾಡುವ ಬದಲು ಜನಪ್ರತಿನಿಧಿಗಳು, ವಿಧಾನಸೌಧದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಹೇಳಿಕೆ ನೀಡಿದಂತೆ, ಆಗಸ್ಟ್ 1ರಂದು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುವ ಪ್ರತಿಭಟನೆಗಳಲ್ಲಿ ನಾವು ಪಾಲ್ಗೊಳ್ಳುವುದಿಲ್ಲ. ಅದರೆ, ಅವರು ನಡೆಸುವ ಹೋರಾಟಕ್ಕೆ ನಮ್ಮ ವಿರೋಧ ಇಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.