ADVERTISEMENT

International Yoga Day 2021: ಹಂಪಿಯಲ್ಲಿ ಯೋಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 2:33 IST
Last Updated 21 ಜೂನ್ 2021, 2:33 IST
ವಿಶ್ವ ಪ್ರಸಿದ್ಧ ಹಂಪಿ ಗಜಶಾಲೆ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ವಿಶ್ವ ಪ್ರಸಿದ್ಧ ಹಂಪಿ ಗಜಶಾಲೆ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.   

ಹೊಸಪೇಟೆ (ವಿಜಯನಗರ): ಇಲ್ಲಿನ ವಿಶ್ವ ಪ್ರಸಿದ್ಧ ಹಂಪಿ ಗಜಶಾಲೆ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಕೇಂದ್ರ ಸಂಸ್ಕೃತಿ ಸಚಿವಾಲಯವು ದೇಶದ 75 ಪಾರಂಪರಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಕ್ರಮ ಆಯೋಜಿಸಿತ್ತು. ಈ ಪೈಕಿ ರಾಜ್ಯದಿಂದ ವಿಶ್ವ ಪಾರಂಪರಿಕ ತಾಣವಾದ ಹಂಪಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿತ್ತು. ದೂರದರ್ಶನ ರಾಷ್ಟ್ರೀಯ ವಾಹಿನಿಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಯಿತು.

ಭಾರತೀಯ ಪುರಾತತ್ತ್ವ ಸರ್ವೇಕ್ಷಣ ಇಲಾಖೆಯ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ. ಕಾಳಿಮುತ್ತು, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಹಂಪಿ ಡಿವೈಎಸ್ಪಿ ಕಾಶಿಗೌಡ ಪಾಲ್ಗೊಂಡಿದ್ದರು. 20 ಜನರಿಗಷ್ಟೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಎಲ್ಲರೂ ಅಂತರ ಕಾಯ್ದುಕೊಂಡು ಯೋಗಾಸನ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.