ADVERTISEMENT

ಹಂಪಿಯಲ್ಲಿ ರಾತ್ರಿಯಿಡೀ ಜಾಗರಣೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2022, 8:33 IST
Last Updated 2 ಮಾರ್ಚ್ 2022, 8:33 IST
ಶಿವರಾತ್ರಿ ಪ್ರಯುಕ್ತ ಹಂಪಿಯಲ್ಲಿ ಮಂಗಳವಾರ ರಾತ್ರಿಯಿಡೀ ಜಾಗರಣೆ ಮಾಡಿದ ಭಕ್ತರು ಬುಧವಾರ ಬೆಳಿಗ್ಗೆ ತುಂಗಭದ್ರಾ ನದಿಯಲ್ಲಿ ಮಿಂದೆದ್ದರುಚಿತ್ರ: ರಾಚಯ್ಯ ಎಸ್‌. ಸ್ಥಾವರಿಮಠ
ಶಿವರಾತ್ರಿ ಪ್ರಯುಕ್ತ ಹಂಪಿಯಲ್ಲಿ ಮಂಗಳವಾರ ರಾತ್ರಿಯಿಡೀ ಜಾಗರಣೆ ಮಾಡಿದ ಭಕ್ತರು ಬುಧವಾರ ಬೆಳಿಗ್ಗೆ ತುಂಗಭದ್ರಾ ನದಿಯಲ್ಲಿ ಮಿಂದೆದ್ದರುಚಿತ್ರ: ರಾಚಯ್ಯ ಎಸ್‌. ಸ್ಥಾವರಿಮಠ   

ಹೊಸಪೇಟೆ (ವಿಜಯನಗರ): ಮಹಾಶಿವರಾತ್ರಿ ಪ್ರಯುಕ್ತ ಭಕ್ತರು ಮಂಗಳವಾರ ಸಂಜೆಯಿಂದ ಬುಧವಾರ ಬೆಳಗಿನ ಜಾವದ ವರೆಗೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಜಾಗರಣೆ ಮಾಡಿದರು.

ವಿವಿಧ ಕಡೆಗಳಿಂದ ಬಂದಿದ್ದ ಅಸಂಖ್ಯ ಭಕ್ತರು ವಿರೂಪಾಕ್ಷೇಶ್ವರನ ದರ್ಶನ ಪಡೆದು, ರಾತ್ರಿಯಿಡೀ ಶಿವನಾಮ ಸ್ಮರಣೆ ಮಾಡಿದರು. ಬುಧವಾರ ಬೆಳಿಗ್ಗೆ ತುಂಗಭದ್ರಾ ನದಿಯಲ್ಲಿ ಮಿಂದೆದ್ದು, ದೇವರ ದರ್ಶನ ಪಡೆದು, ಸ್ಮಾರಕಗಳನ್ನು ಕಣ್ತುಂಬಿ ಅವರ ಊರುಗಳಿಗೆ ಮರಳಿದರು.

ಹಬ್ಬದ ನಿಮಿತ್ತ ಮಂಗಳವಾರ ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿರೂಪಾಕ್ಷೇಶ್ವರನಿಗೆ ಚಿನ್ನದ ಕಿರೀಟ ಧಾರಣೆ ಮಾಡಿ ವಿಶೇಷ ಪೂಜೆ ನೆರವೇರಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.