
ಹರಪನಹಳ್ಳಿ (ವಿಜಯನಗರ ಜಿಲ್ಲೆ): ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಜತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಸಭ್ಯವಾಗಿ ಮಾತನಾಡಿದ್ದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ತಾಲ್ಲೂಕಿನ ತಾವರಗುಂದಿ ಗ್ರಾಮದ ಬಳಿ ತುಂಗಭದದ್ರಾ ನದಿತಟದಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಜಾನಪದ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅಧಿಕಾರಿಗಳ ಜೊತೆ ರಾಜಕಾರಣಿಗಳು ಪ್ರೀತಿಯಿಂದ ಮಾತನಾಡಬೇಕು. ರಾಜೀವ್ ಗೌಡ ಮಾತನಾಡಿದ್ದನ್ನು ನಾನು ಕೇಳಿಸಿಕೊಂಡಿದ್ದೇನೆ, ಅವರು ಮಾತನಾಡಿರುವುದು ತಪ್ಪು’ ಎಂದರು.
‘ಎಂ.ಪಿ.ಪ್ರಕಾಶ್ ಅವರು ನವೆಂಬರ್ ನಲ್ಲಿ ಹಂಪಿಉತ್ಸವ ಮಾಡುತ್ತಿದ್ದರು, ಅದೇ ದಿನಾಂಕಕ್ಕೆ ಮಾಡಲು ಶಾಸಕಿ ಎಂ.ಪಿ.ಲತಾ ಅವರು ಮನವಿ ಮಾಡಿದ್ದರು. ಮುಂದಿನ ಬಾರಿ ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.