ADVERTISEMENT

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿ, ಜಿಂದಾಲ್‌ ಉದ್ಯೋಗಿ ಸಾವು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 6:11 IST
Last Updated 16 ಸೆಪ್ಟೆಂಬರ್ 2022, 6:11 IST
ಪ್ರಕಾಶ್‌
ಪ್ರಕಾಶ್‌    

ಹೊಸಪೇಟೆ (ವಿಜಯನಗರ): ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಎದುರಿನಿಂದ ಡಿಕ್ಕಿ ಹೊಡೆದಿದ್ದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗಾದಿಗನೂರು ಸಮೀಪ ನಡೆದಿದೆ.

ತಾಲ್ಲೂಕಿನ ಧರ್ಮಸಾಗರ ಗ್ರಾಮದ ನಿವಾಸಿ ಪ್ರಕಾಶ್‌ (20) ಮೃತ ಯುವಕ. ‘ಪ್ರಕಾಶ್‌ ಜಿಂದಾಲ್‌ ಉದ್ಯೋಗಿಯಾಗಿದ್ದರು. ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಬರುವಾಗ ಲಾರಿ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.