ಹೊಸಪೇಟೆ (ವಿಜಯನಗರ): ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ದೇವದಾಸಿ ಕುಟುಂಬದಲ್ಲಿ ಜನಿಸಿದ ಕಾಮಾಕ್ಷಿ ಅವರು ತಮ್ಮ ಛಲ, ಸಾಧನೆಯಿಂದ ಇಂಗ್ಲೆಂಡ್‌ನ ಸಸೆಕ್ಸ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆ ಆಗಿರುವುದಕ್ಕೆ ಬಹುತೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರಿಗೆ ನೆರವಿಗೆ ಹಲವರು ಮುಂದಾಗಿದ್ದಾರೆ.
‘ಪ್ರಜಾವಾಣಿ’ಯ ಆ.6ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿದ್ದನ್ನು ಗಮನಿಸಿ ನೂರಾರು ಕರೆಗಳು ಬಂದಿದ್ದು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಸಂಸದ ಗೋವಿಂದ ಕಾರಜೋಳ ಅವರ ಪುತ್ರ, ಯುವ ಭಾರತ ಸಂಸ್ಥೆಯ ಅಧ್ಯಕ್ಷ ಉಮೇಶ್ ಕಾರಜೋಳ ಅವರು ನೆರವಿನ ಭರವಸೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಈ ವರದಿಯನ್ನು ಟ್ಯಾಗ್ ಮಾಡಿ, ‘ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿದ ಪ್ರತಿ ಯೋಜನೆಯೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅದರ ಸಂಪೂರ್ಣ ಪ್ರಯೋಜನ ಸಿಗುವಂತೆ ಮಾಡುತ್ತವೆ ಎನ್ನುವುದಕ್ಕೆ ಈ ಹಿಂದೆ ನಾನು ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ಜಾರಿಗೊಳಿಸಿದ್ದ ‘ಪ್ರಬುದ್ಧ’ ಯೋಜನೆಯೇ ಸಾಕ್ಷಿ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.