ADVERTISEMENT

ಕಮಲಾಪುರ ಅಭಿವೃದ್ಧಿಗೆ ₹15 ಕೋಟಿ: ಗವಿಯಪ್ಪ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 3:12 IST
Last Updated 11 ಅಕ್ಟೋಬರ್ 2025, 3:12 IST
ಹೊಸಪೇಟೆ ಸಮೀಪದ ಕಮಲಾಪುರದಲ್ಲಿ ನಿರ್ಮಿಸಿದ ಪುರಸಭೆಯ ನೂತನ ಕಚೇರಿ ಕಟ್ಟಡವನ್ನು ಶಾಸಕ ಎಚ್.ಆರ್. ಗವಿಯಪ್ಪ ಉದ್ಘಾಟಿಸಿದರು
ಹೊಸಪೇಟೆ ಸಮೀಪದ ಕಮಲಾಪುರದಲ್ಲಿ ನಿರ್ಮಿಸಿದ ಪುರಸಭೆಯ ನೂತನ ಕಚೇರಿ ಕಟ್ಟಡವನ್ನು ಶಾಸಕ ಎಚ್.ಆರ್. ಗವಿಯಪ್ಪ ಉದ್ಘಾಟಿಸಿದರು   

ಹೊಸಪೇಟೆ (): ತಾಲ್ಲೂಕಿನ ಕಮಲಾಪುರ ಪಟ್ಟಣದ ಎಲ್ಲ 21 ವಾರ್ಡ್‍ಗಳಿಗೆ ಮೂಲಸೌಕರ್ಯ ಮತ್ತು ಸಮಗ್ರ ಅಭಿವೃದ್ಧಿಗೆ ₹15 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ತಾಲ್ಲೂಕಿನ ಕಮಲಾಪುರ ಪುರಸಭೆ ಆವರಣದಲ್ಲಿ ₹1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪುರಸಭೆ ಕಚೇರಿಯ ನೂತನ ಕಟ್ಟಡ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಕಮಲಾಪುರದ ಪ್ರತಿ ವಾರ್ಡ್‍ನಲ್ಲೂ ಸಿಸಿ ರಸ್ತೆ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ. ಶೀಘ್ರವೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು’ ಎಂದರು.

ADVERTISEMENT

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ‘ಸಾರ್ವಜನಿಕರಿಗೆ ಉತ್ತಮ ಸೇವೆ ಮತ್ತು ಸ್ಥಳೀಯರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು’ ಎಂದರು.

ಸಂಸದ ಇ.ತುಕಾರಾಂ, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಪುರಸಭೆ ಅಧ್ಯಕ್ಷೆ ಅಮೀನಾ, ಉಪಾಧ್ಯಕ್ಷ ಎಚ್. ಗೋಪಾಲಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಅಜಯಕುಮಾರ್, ಸದಸ್ಯರಾದ ರಾಜ, ಸೈಯ್ಯದ್ ಅಮಾನುಲ್ಲಾ, ಜಿ.ಅನ್ವರ್, ಕೆ.ವಿ. ಸರಿತಾ, ಮುಕ್ತಿಯಾರ್ ಪಾಷ, ಪಿ.ರವಿಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.