ADVERTISEMENT

ಅಂಚೆಯ ಮೂಲಕ ಕನ್ನಡ ಕಲಿಯಲು ಅವಕಾಶ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 2:03 IST
Last Updated 27 ಡಿಸೆಂಬರ್ 2025, 2:03 IST
   

ಹೊಸಪೇಟೆ: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯ ವತಿಯಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ 1 ವರ್ಷ ಅಂಚೆ ಮೂಲಕ ಕನ್ನಡ ಶಿಕ್ಷಣ ಕಲಿಸಲಾಗುತ್ತಿದ್ದು ಅಸಕ್ತರು ಹೆಸರು ನೋಂದಾಯಿಸಬಹುದು.

ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.0821-2345128 ಇವರಿಗೆ ₹5 ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸದ ಲಕೋಟಿಯನ್ನು ಕಳುಹಿಸಿ ಪಡೆದುಕೊಳ್ಳಬಹುದು, ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ 2026ರ ಜನವರಿ 10 ರೊಳಗೆ ತಲುಪಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT