
ಹೊಸಪೇಟೆ: ‘ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಲವು ವಿಭಾಗಗಳಿಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರಬೇಕು. ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಉತ್ತಮ ಕೊಡುಗೆ ನೀಡಬೇಕಾಗಿದೆ’ ಎಂದು ವಿಶ್ವವಿದ್ಯಾಲಯದ ಲಲಿತಕಲಾ ವಿಭಾಗದ ಡೀನ್ ಪ್ರೊ. ಶಿವಾನಂದ ವಿರಕ್ತಮಠ ಹೇಳಿದರು.
ಶುಕ್ರವಾರ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಡಾ.ಚಂದ್ರಶೇಖರ ಕಂಬಾರ ಅವರ 89ನೇ ಜನ್ಮದಿನದ ಪ್ರಯುಕ್ತ ಗೀತ ಸಂತಸ ಮತ್ತು ಕಂಬಾರರ ಕವನಗಳ ವಾಚನ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕೌಶಲಾಧಾರಿತ ಶಿಕ್ಷಣದ ವಿಸ್ತರಣೆಯನ್ನು ಈ ವಿಶ್ವವಿದ್ಯಾಲಯ ಮಾಡಬೇಕು’ ಎಂದರು.
ಶೈಕ್ಷಣಿಕ ಮತ್ತು ಸಂಶೋಧನಾ ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ.ಎಸ್.ವೈ. ಸೋಮಶೇಖರ ಮಾತನಾಡಿ, ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಸ್ತಂಭಗಳೆಂದು ಕಂಬಾರರು ಕರೆಯುತ್ತಿದ್ದರು ಎಂದರು.
ಕುಲಪತಿ ಡಿ.ವಿ. ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮರಿಯಮ್ಮನಹಳ್ಳಿಯ ರಂಗಭೂಮಿ ಕಲಾವಿದದೆ ನಾಗರತ್ನಮ್ಮ, ವಿಭಾಗದ ಮುಖ್ಯಸ್ಥ ಪ್ರೊ.ವೀರೇಶ ಬಡಿಗೇರ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.