ADVERTISEMENT

ಕಾರ್ಗಿಲ್ ವಿಜಯೋತ್ಸವ: ಬೃಹತ್ ತಿರಂಗಾಯಾತ್ರೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 2:57 IST
Last Updated 27 ಜುಲೈ 2025, 2:57 IST
ಹೊಸಪೇಟೆಯಲ್ಲಿ ಶನಿವಾರ ಕಾರ್ಗಿಲ್ ವಿಜಯ ದಿನದ ಪ್ರಯುಕ್ತ ಬೃಹತ್ ತಿರಂಗಾಯಾತ್ರೆ ನಡೆಯಿತು  –ಪ್ರಜಾವಾಣಿ ಚಿತ್ರ/ ಲವ ಕೆ.
ಹೊಸಪೇಟೆಯಲ್ಲಿ ಶನಿವಾರ ಕಾರ್ಗಿಲ್ ವಿಜಯ ದಿನದ ಪ್ರಯುಕ್ತ ಬೃಹತ್ ತಿರಂಗಾಯಾತ್ರೆ ನಡೆಯಿತು  –ಪ್ರಜಾವಾಣಿ ಚಿತ್ರ/ ಲವ ಕೆ.   

ಹೊಸಪೇಟೆ (ವಿಜಯನಗರ): ಇಪ್ಪತ್ತಾರನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಪ್ರಯುಕ್ತ ಶನಿವಾರ ಇಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ತಿರಂಗಾಯಾತ್ರೆ ನಡೆಯಿತು.

ಶಾಸಕ ಎಚ್‌.ಆರ್.ಗವಿಯಪ್ಪ ಅವರು ತಿರಂಗಾಯಾತ್ರೆಗೆ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಚಾಲನೆ ನೀಡಿದರು. ಎನ್‌ಸಿಸಿ, ಸ್ಕೌಟ್ಸ್‌, ಗೈಡ್ಸ್‌ಗಳು, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಾರ್ಯಕರ್ತರು 1000 ಅಡಿ ಉದ್ದದ ರಾಷ್ಟ್ರಧ್ವಜವನ್ನು ಹಿಡಿದು ಮುಖ್ಯರಸ್ತೆಗಳಲ್ಲಿ ಸಾಗಿದಾಗ ನೂರಾರು ಜನರು ಅದನ್ನು ನೋಡಿ ಸಂಭ್ರಮಿಸಿದರು. ಭಾರತ ಮಾತೆಗೆ ಜಯವಾಗಲಿ, ವಂದೇ ಮಾತರಂ, ವೀರ ಯೋಧರಿಗೆ ನಮನಗಳು, ಕಾರ್ಗಿಲ್ ವೀರರು ಅಮರರಾಗಲಿ ಎಂಬ ಘೋಷಣೆಗಳು ಮೊಳಗಿದವು. ಪುನೀತ್ ರಾಜ್‌ಕುಮಾರ್ ವೃತ್ತ, ಅಂಬೇಡ್ಕರ್‌ ವೃತ್ತ ಮೂಲಕ ಮೆರವಣಿಗೆ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ಸೇರಿತು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ್‌, ವಿಶ್ವನಾಥ, ಅಶೋಕ ಚಿತ್ರಗಾರ, ಮಲ್ಲಿಕಾರ್ಜುನ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.