
ಪ್ರಾತಿನಿಧಿಕ ಪತ್ರ
ಹೊಸಪೇಟೆ: ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2024 ಮತ್ತು 25ನೇ ಸಾಲಿನ ಮಕ್ಕಳ ಕ್ಷೇತ್ರದಲ್ಲಿ ರಚಿಸಲಾದ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿನ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ.
2024 ಮತ್ತು 25ನೇ ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ. ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುವುದು.
ಕೃತಿಯ 4 ಪ್ರತಿಗಳನ್ನು ಹಾಗೂ ಸವಿರಗಳನ್ನೊಳಗೊಂಡ ಅರ್ಜಿಯನ್ನು ಫೆ.20ರೊಳಗೆ ಅಕಾಡಮಿ ಕೇಂದ್ರ ಕಚೇರಿಗೆ ಅಂಚೆಯ ಮೂಲಕ ಸಲ್ಲಿಸಬೇಕು. ಮಾಹಿತಿಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004, ದೂ.ಸಂ. 0836-2465490 8050392209 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.