ADVERTISEMENT

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹಂಪಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 12:50 IST
Last Updated 26 ಜೂನ್ 2022, 12:50 IST
   

ಹೊಸಪೇಟೆ (ವಿಜಯನಗರ): ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ಅವರು ಭಾನುವಾರ ಸಂಜೆ ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿದರು.

ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಅವರು, ವಿಜಯ ವಿಠಲ ದೇವಸ್ಥಾನ, ಉಗ್ರ ನರಸಿಂಹ, ಕಮಲ ಮಹಲ್‌, ಆನೆಸಾಲು ಮಂಟಪ, ಮಹಾನವಮಿ ದಿಬ್ಬ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಶನಿವಾರ ಅವರು ಅಂಜನಾದ್ರಿಗೆ ಭೇಟಿ ನೀಡಿದ್ದರು.

ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ, ವಿರೂಪಾಕ್ಷ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್‌ ರಾವ್‌, ಎಎಸ್‌ಐ ಕರಿಯಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.