ADVERTISEMENT

ಕಸಾಪ ಕಮಲಾಪುರ ಹೋಬಳಿ ಪದಾಧಿಕಾರಿಗಳ ಪದಗ್ರಹಣ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 3:10 IST
Last Updated 30 ಸೆಪ್ಟೆಂಬರ್ 2022, 3:10 IST
ಕನ್ನಡ ಸಾಹಿತ್ಯ ಪರಿಷತ್ತಿನ ಕಮಲಾಪುರ ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು
ಕನ್ನಡ ಸಾಹಿತ್ಯ ಪರಿಷತ್ತಿನ ಕಮಲಾಪುರ ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು   

ಹೊಸಪೇಟೆ (ವಿಜಯನಗರ): ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾಲ್ಲೂಕಿನ ಕಮಲಾಪುರದ ರೈತ ಭವನದಲ್ಲಿ ಬುಧವಾರ ರಾತ್ರಿ ನಡೆಯಿತು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಮರೇಶ ಯತಗಲ್‌ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಕಟ್ಟುವ ಕೆಲಸದ ಜೊತೆಗೆ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಕನ್ನಡ ಶ್ರೀಮಂತ ಭಾಷೆ. ಅದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಕನ್ನಡ ಭಾಷೆಗೆ ಹಲವಾರು ಸವಾಲುಗಳಿವೆ. ಸ್ಥಳೀಯ ಪ್ರಜ್ಞಾವಂತರು ಜಾಗೃತರಾಗಿ ಕನ್ನಡದ ಸೇವಕರಾಗಿ ಕಾರ್ಯನಿರ್ವಹಿಸುವುದು ಅಗತ್ಯವಿದೆ ಎಂದು ಹೇಳಿದರು.

ADVERTISEMENT

ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಮಾತನಾಡಿ, ಸಾಹಿತ್ಯ ಪರಿಷತ್ತು ಕನ್ನಡದ ಉತ್ತಮ ಕೆಲಸಗಳನ್ನು ಮಾಡುವುದರೊಂದಿಗೆ ಕೇಂದ್ರ ಸ್ಥಾನಕ್ಕೆ ಸೀಮಿತವಾಗಿತ್ತು. ಆದರೆ, ಇಂದು ಹೋಬಳಿ ಮಟ್ಟಕ್ಕೆ ಅದರ ಕಾರ್ಯಕ್ಷೇತ್ರ ವಿಸ್ತರಿಸಿದೆ ಎಂದರು.

ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ನಾಯಕರ ಹುಲುಗಪ್ಪ, ಹೋಬಳಿ ಘಟಕದ ಅಧ್ಯಕ್ಷ ಉದೇದಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸೈಯದ್ ಅಮಾನುಲ್ಲಾ, ಮುಖ್ಯಾಧಿಕಾರಿ ಎನ್. ನಾಗೇಶ್, ಸಂತೋಷ ಕುಮಾರ್, ನಾಗರಾಜ ಬಡಿಗೇರ, ಅಂಬಣ್ಣ, ವೀರಭದ್ರ ನಾಯಕ, ಕಡ್ಡಿರಾಂಪುರ ಪ್ರಶಾಂತ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.