ಹೊಸಪೇಟೆ(ವಿಜಯನಗರ): ಇಲ್ಲಿನ ತುಂಗಭದ್ರಾ ಅಣೆಕಟ್ಟೆಗೆ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಜಲಾಶಯದ ಪವರ್ ಹೌಸ್, ಮುಖ್ಯದ್ವಾರದ ಬಳಿ ಭದ್ರತಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದ್ದು ಐವರು ಮುಖ್ಯ ಪೇದೆ, ಮೂವರು ಮಹಿಳಾ ಸಿಬ್ಬಂದಿ ಒಳಗೊಂಡಂತೆ ಒಟ್ಟು 23 ಸಿಬ್ಬಂದಿ ಪಾಳಿ ಪ್ರಕಾರ ಕರ್ತವ್ಯ ನಿರ್ವಹಿಸುವರು. ಈ ಹಿಂದೆ ಸಶಸ್ತ್ರ ಪೊಲೀಸ್ ಹಾಗೂ ಸಿವಿಲ್ ಸಿಬ್ಬಂದಿ ಇದ್ದರು.
‘ಜಲಾಶಯಕ್ಕೆ ಹೆಚ್ಚಿನ ಭದ್ರತೆ ಮನಗಂಡು ತುಂಗಭದ್ರಾ ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಅದರ ಅನ್ವಯ ಕೈಗಾರಿಕಾ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಅತ್ಯುತ್ತಮ ತರಬೇತಿ ಪಡೆದ ಶಸ್ತ್ರಸಜ್ಜಿತ ಪಡೆಗಳು ಅಣೆಕಟ್ಟೆಗೆ ಭದ್ರತೆ ಒದಗಿಸುವರು’ ಎಂದು ಟಿ.ಬಿ.ಡ್ಯಾಂ ಸಿಪಿಐ ವಿ. ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.