ಹೊಸಪೇಟೆ (ವಿಜಯನಗರ): ಹೈದರಾಬಾದ್ ಕರ್ನಾಟಕ ಭಾಗ ಅಭಿವೃದ್ಧಿಯಲ್ಲಿ ಹಿಂದುಳಿದ ಕಾರಣ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಸ್ಥಾಪಿಸಲಾಗಿದ್ದು, ಈ ಬಾರಿ ಜಿಲ್ಲೆಗೆ ₹319 ಕೋಟಿ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಬುಧವಾರ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಕಲ್ಯಾಣ ಕರ್ನಾಟಕ ಉತ್ಸವ ದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ನೀಡಲಾದ ಅನುದಾನದಲ್ಲಿ ₹224 ಕೋಟಿ ಮೈಕ್ರೋ ಮತ್ತು ₹94 ಕೋಟಿ ಮ್ಯಾಕ್ರೊ ಅನುದಾನ ಆಗಿದೆ ಎಂದರು.
ಶಾಸಕ ಎಚ್. ಆರ್.ಗವಿಯಪ್ಪ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸಾಧನೆಯಿಂದ ಈ ಪ್ರಾಂತ ಹೈದರಾಬಾದ್ ನಿಜಾಮರಿಂದ ಮುಕ್ತವಾಯಿತು. 1990ರ ದಶಕದಿಂದ ಈ ಭಾಗ ಅಭಿವೃದ್ಧಿಯ ಪಥದಲ್ಲಿ ಸಾಗಿದೆ ಎಂದರು.
ಹಡಗಲಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಎಚ್. ಎಂ.ಗುರುಬಸವರಾಜ್ ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರ ಅನುಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.
ಎಂಟು ತುಕಡಿಗಳಿಂದ ಆಕರ್ಷಕ ಪರೇಡ್ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.